ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಇಬ್ಬರು ಸಾವನ್ನುಪ್ಪಿರುವ ಘಟನೆ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೊಡ್ಡತಮ್ಮನಹಳ್ಳಿ ಗೆಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಮೃತರನ್ನು ದೊಡ್ಡತಮ್ಮನಹಳ್ಳಿಯ ಬಾಲು (22) ಹಾಗೂ ಮಿಟ್ಟ ಹಳ್ಳಿಯ ಮಲ್ಲೇಶ್ (32) ಎಂದು ತಿಳಿದುಬಂದಿದೆ. ಘಟನೆ ಸಂಭಂದ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.