ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಕೆಎಸ್ಆರ್ಟಿಸಿ ಟಿಕೆಟ್, ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿತು ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು ಇನ್ನೂ ಐದು ತಿಂಗಳಲ್ಲಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 5ರಷ್ಟು ಮತ್ತೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು ಇತ್ತೀಚೆಗೆ ತಾನೇ ಮೆಟ್ರೋ ಪ್ರಯಾಣ ದರು ಏರಿಕೆ ಮಾಡಲಾಗಿದೆ. ಬರೋಬ್ಬರಿ ಶೇಕಡಾ 71ರಷ್ಟು ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಈ ದರ ಏರಿಕೆಯಿಂದ ಪ್ರಯಾಣಿಕ ಇನ್ನು ಚೇತರಿಸಿಕೊಂಡಿಲ್ಲ. ಇದರ ಬೆನ್ನಲ್ಲೇ ಮೆಟ್ರೋ ಮತ್ತೊಂದು ದರ ಏರಿಕೆ ನಿರ್ಧಾರ ಮಾಡಿದೆ. ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ.
ಇನ್ನು ಮುಂದೆ ಮೆಟ್ರೋ ಪ್ರಯಾಣ ದರ ಪ್ರತಿ ವರ್ಷ ಏರಿಕೆಯಾಗಲಿದೆ. ದರ ಏರಿಕೆ ಸಮಿತಿ ಶಿಫಾರಸ್ಸಿನಂತೆ ಪ್ರತಿ ವರ್ಷವೂ ಮೆಟ್ರೋ ಪ್ರಯಾಣ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದೀಗ ಪ್ರತಿ ವರ್ಷ ಫೆಬ್ರವರಿ ತಿಂಗಳಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲು ನಮ್ಮ ಮೆಟ್ರೋ ಮುಂದಾಗಿದೆ. ಇದು ಪ್ರಯಾಣಿಕರಿಗೆ ಮತ್ತಷ್ಟು ಹೊರೆಯಾಗಿದೆ. ಮೆಟ್ರೋ ನಿಗಮದ ನಿರ್ಧಾರಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.