ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಪ್ರವೇಶಕ್ಕೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ವಿಧಿಸಿ ಕಲ್ಬುರ್ಗಿ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಆದೇಶ ಹೊರಡಿಸಿದ್ದಾರೆ.
ಜೇವರ್ಗಿ ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಂಡಿದ್ದು ಶೋಭಾ ಯಾತ್ರೆಗೆ ಪ್ರಮೋದನೆ ಮುತಾಲಿಕ್ ಚಾಲನೆ ನೀಡಲು ಬರಬೇಕಿತ್ತು ಪ್ರಚೊದನಕಾರಿ ಭಾಷಣ ಹಾಗೂ ಕೋಮುದ್ವೇಷ ಭಾಷಣದ ಹಿನ್ನೆಲೆಯಲ್ಲಿ ಮುತಾಲಿಕ್ ಗೆ ನಿರ್ಬಂಧ ವಿಧಿಸಲಾಗಿದೆ ನಾಳೆ ಬೆಳಿಗ್ಗೆ 6 ಗಂಟೆವರೆಗೆ ಮುತಾಲಿಕೆಗೆ ನಿರ್ಬಂಧ ವಿಧಿಸಲಾಗಿದೆ.