ದಾವಣಗೆರೆ : ಇತ್ತೀಚಿಗೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಲ್ಲದೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಕೂಡ ಈದ್ ಮಿಲಾದ್ ಹಬ್ಬದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಕಿಡಿಗೇಡಿಗಳು ಘೋಷಣೆ ಕೂಗಿದ್ದರು. ಈ ವಿಚಾರವಾಗಿ ಬಿಜೆಪಿ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾತು ಎತ್ತಿದರೆ ಸಾಕು ಬಿಜೆಪಿಯವರು ಬೆಂಕಿ ಹಚ್ಚುತ್ತಾರೆ ಎಂದು ಹೇಳುತ್ತಾರೆ. ಧರ್ಮಸ್ಥಳ, ಚಾಮುಂಡಿ ವಿಚಾರದಲ್ಲಿ ಬೆಂಕಿ ಹಚ್ಚಿದ್ದು ಯಾರು? ಗಣೇಶ ಮೆರವಣಿಗೆಯಲ್ಲಿ ಕಲ್ಲೆಸೆದವರಿಗೆ ಬೆಂಬಲ ಕೊಡುತ್ತೀರಿ, ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದೀರಿ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ದರ್ಪ ದೌಲತ್ತು ಮುಂದುವರಿದರೆ ನಿಮಗೆ ಕರ್ನಾಟಕದ ಜನತೆಗೆ ತಕ್ಕ ಪಾಠ ಕಲಿಸುತ್ತಾರೆ. ಕೋಮು ಗಲಭೆಗೆ ಇಡೀ ಸರ್ಕಾರವೇ ಕಾರಣ ಕಲ್ಲು ತೂರಾಟ, ಬೆಂಕಿ ಹಚ್ಚುವವರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಎಂದು ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹಿಸಿದರು.