ಉತ್ತರಪ್ರದೇಶ: ಸಹ ಜೀವನದಲ್ಲಿ( Living Together) ಇದ್ದು, ನಾಲ್ಕು ವರ್ಷ ಒಪ್ಪಿತ ದೈಹಿಕ ಸಂಬಂಧ ಹೊಂದಿದ ಬಳಿಕ ಮದುವೆಯಾಗಲು ವ್ಯಕ್ತಿಯೊಬ್ಬ ನಿರಾಕರಿಸಿದ್ದಲ್ಲಿ ಅದು ಗಂಭೀರ ಅಪರಾಧ ಆಗುವುದಿಲ್ಲ ಎಂಬುದಾಗಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸಹ ಜೀವನದಲ್ಲಿದ್ದಂತ ವ್ಯಕ್ತಿಯೊಬ್ಬನ ವಿರುದ್ಧ ತಾನು ನೀಡಿದ್ದಂತ ದೂರನ್ನು ಮಹೋಬಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿತ್ತು. ಕಳೆದ ವರ್ಷದ ಆಗಸ್ಟ್.17ರಂದು ಈ ತೀರ್ಪು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮಹಿಳೆ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಅರುಣಕುಮಾರ್ ಸಿಂಗ್ ದೇಶವಾಲ್ ಅವರಿದ್ದಂತ ನ್ಯಾಯಪೀಠವು, ಸರಿ-ತಪ್ಪುಗಳನ್ನು ನಿರ್ಧರಿಸಬಲ್ಲ ಸಾಮರ್ಥ ಇರುವ ವಯಸ್ಕರಿಬ್ಬರು ಹಲವು ವರ್ಷ ಸಹಜೀವನ ನಡೆಸುತ್ತಿದ್ದರೇ, ಅವರು ಅಂತಹ ಸಂಬಂಧವನ್ನು ಸ್ವಇಚ್ಛೆಯಿಂದ ಆಯ್ಕೆ ಮಾಡಿಕೊಂಡಂತೆ. ಅದರಿಂದ ಆಗುವ ಪರಿಣಾಮಗಳ ಕುರಿತು ಅವರಿಗೆ ಅರಿವೂ ಇರುತ್ತದೆ ಎಂದೇ ಊಹಿಸಬೇಕಾಗುತ್ತದೆ ಎಂಬುದಾಗಿ ಹೇಳಿದರು.
ಸಹ ಜೀವನದ ಸಂಗಾತಿಯಾಗಿದ್ದಂತ ವ್ಯಕ್ತಿ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿದ ಮಹಿಳೆ ಸಲ್ಲಿಸಿದ್ದಂತ ಮೇಲ್ಮನವಿಯನ್ನು ನ್ಯಾಯಪೀಠವು ತಿರಸ್ಕರಿಸಿತು. ಮದುವೆ ಮಾಡಿಕೊಳ್ಳುವ ಭರವಸೆ ಇದ್ದ ಕಾರಣವೇ ಒಪ್ಪಿತ ಸಂಬಂಧಕ್ಕೆ ಸಮ್ಮತಿಸಿದ್ದೆ ಎಂಬ ವಾದವನ್ನು ಒಪ್ಪಿಕೊಳ್ಳೋದಕ್ಕೆ ಸಾಧ್ಯವಿಲ್ಲ ಎಂಬುದಾಗಿ ಹೇಳುವ ಮೂಲಕ ಸೆಪ್ಟೆಂಬರ್.8ರಂದು ಹೊರಡಿರುವಂತ ಆದೇಶದಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಪೀಠ ಮಾಡಿದೆ.
ಮಲಗುವ ಮುನ್ನ ಈ 3 ಅಕ್ಷರಗಳ ಮಂತ್ರವನ್ನು ಪಠಿಸಿ, ಮರುದಿನ ನಿಮ್ಮ ಎಲ್ಲಾ ಪ್ರಯತ್ನ ಯಶಸ್ವಿ
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಗೆ ಕೆಪಿಸಿಸಿ ಭರ್ಜರಿ ಸಿದ್ಧತೆ: ಪೂರ್ವತಯಾರಿ ಸಮಿತಿ ರಚಿಸಿ ಡಿಕೆಶಿ ಆದೇಶ







