ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ಬೈಕ್ ಸವಾರ ಒಬ್ಬ ಬಲಿಯಾಗಿದ್ದಾರೆ. ಆಳವಾದ ಗುಂಡಿ ತಪ್ಪಿಸಲು ಹೋಗಿ ಮಹೇಶ್ ಎನ್ನುವ ಬೈಕ್ ಸವಾರ ಸಾವನಪ್ಪಿದ್ದಾರೆ. ಮೃತ ಮಹೇಶ್ ಮೆಡಿಕಲ್ ಪ್ರತಿನಿಧಿಯಾಗಿದ್ದರು.
ಶಿವಮೊಗ್ಗದ ಮಲಗುಪ್ಪ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ.