ಬೆಂಗಳೂರು:ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನವನ್ನು ಪ್ರಶ್ನಿಸಿದ್ದ ಮೈಸೂರು ಮಾಜಿ ಸಂಸದ ಪ್ರತಾಪ್ ಸಿಂಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ. ಇದರೊಂದಿಗೆ ಮೂವರು ಕೂಡ ಅರ್ಜಿಯನ್ನು ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿಯಲ್ಲಿ ಉಲ್ಲೇಖ ಮಾಡಿರುವಂತೆ ಯಾವುದೇ ಸಾರ್ವಜನಿಕವಾಗಿ ಹಕ್ಕು ಉಲ್ಲೇಖವಾಗಿಲ್ಲ ಅಂತ ತಿಳಿಸಿದೆ. ಇದರೊಂದಿಗೆ ಪ್ರತಾಪ್ ಸಿಂಹ ಸಲ್ಲಿಸಿದ್ದ ವಜಾ ಮಾಡಿದೆ. ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದರು., ಈ ಬಾರಿಯ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನವನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಕಾನೂನು ಹೋರಾಟಕ್ಕೆ ಮುಂದಾಗಿದ್ದರು.