ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ.
ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವುದು ತಪ್ಪಲ್ಲ.
ಈ ವೇಳೆ ಸಿಜೆ ವಿಭು ಬಖ್ರು ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದು ಪ್ರಶ್ನಿಸಿದರು.ನಿಮ್ಮ ಅಭಿಪ್ರಾಯವನ್ನು ಕೂಡ ಸೂಕ್ತ ವೇದಿಕೆಯಲ್ಲಿ ಹೇಳಬಹುದು. ಆದರೆ ಸಂವಿಧಾನ ನೀಡಿರುವ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದರು. ಅದಕ್ಕ್ಕೆ ಚಾಮುಂಡೇಶ್ವರಿ ದೇವಿಗೆ ಪುಷ್ಪರ್ಚನೆಯ ಸಂಪ್ರದಾಯವಿದೆ. ಆದರೆ ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದು ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದಿಸಿದರು.
ಇದಕ್ಕೆ ಸಿಜೆ ವಿಭು ಬಖ್ರು ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ವ್ಯಕ್ತಿಯ ಆಸ್ತಿಯನ್ನು ಕಿತ್ತೂಕೊಂಡಿದ್ದರೆ ಪ್ರಶ್ನಿಸಿದರು. ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿಟ್ಟುಕೊಳ್ಳಲಾದೆ ಎಂದು ಪ್ರಶ್ನೆ ಮಾಡಿದರು. ಈ ವೇಳೆ ಅರ್ಜಿದಾರರಿಗೆ ದಂಡ ವಿಧಿಸಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು. ದಸರಾ ಉದ್ಘಾಟಿಸಿದ ನಿಸಾರ್ ಅಹಮದ್ ಜೊತೆಗೆ ಪ್ರತಾಪ್ ಸಿಂಹ ಇದ್ದರು ಆಗ ವಿರೋಧಿಸದೆ ಮುಸ್ಲಿಂ ಮಹಿಳೆ ಎಂಬ ಕಾರಣಕ್ಕೆ ಇದೀಗ ವಿರೋಧಿಸುತ್ತಿದ್ದಾರೆ ಎಂದು ವಾದಿಸಿದರು.a