ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿ ಉದ್ಯಮಿ ಕುಮಾರಸ್ವಾಮಿ ಮನೆ ಮೇಲೆ ಸಿಬಿಐ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದೆ.
ಉದ್ಯಮಿ ಕುಮಾರಸ್ವಾಮಿ ಮಗ ಗೋವಿಂದರಾಜು ಮನೆಗಳ ಮೇಲೆ ಇದೀಗ ಸಿವಿಐ ನಡೆಸಿದೆ. ಕುಮಾರಸ್ವಾಮಿ ಪುತ್ರ ಗೋವಿಂದರಾಜು ಬಳ್ಳಾರಿಯ ಹಾಲಿ ಕಾರ್ಪೊರೇಟರ್ ಆಗಿದ್ದು, ಬಳ್ಳಾರಿಯ ಗಾಂಧಿನಗರದಲ್ಲಿರುವ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ನೆಕ್ಕಂಟಿ ನಾಗರಾಜ್ ಖಾತೆಯಿಂದ ಗೋವಿಂದರಾಜು ಖಾತೆಗೆ ಅಕ್ರಮ ಹಣ ವರ್ಗಾವಣೆ ಸಂಬಂಧ ಗೋವಿಂದರಾಜು ಮನೆಯಲ್ಲಿ ಸಿಬಿಐ ದಾಖಲೆ ಪರಿಶೀಲನೆ ನಡೆಸುತ್ತಿದೆ.