ಹುಬ್ಬಳ್ಳಿ : ಇತ್ತೀಚಿಗೆ ಗುಜರಾತಿನ ಅಹಮದಾಬಾದ್ ನಲ್ಲಿ ವಿಮಾನ ದುರಂತದಲ್ಲಿ 275 ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅದಾದ ಬಳಿಕ ಇದೀಗ ಹುಬ್ಬಳ್ಳಿಯಲ್ಲಿ ಭಾರಿ ಅನಾಹುತ ಒಂದು ತಪ್ಪಿದೆ. ಪ್ರಯಾಣಿಕನೋರ್ವ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಹೌದು ಕಳೆದ ಶುಕ್ರವಾರ ಸಂಜೆ ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಅಪ್ರೊನ್ ರ‍್ಯಾಂಪ್ ಬೇನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಶಹಾಪುರದ ನಿರಂಜನ ಎಂಬಾತ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಆತಂಕ ಸೃಷ್ಟಿಸಿದ ಪ್ರಯಾಣಿಕ.
ನಿರಂಜನ ಹುಬ್ಬಳ್ಳಿಯಿಂದ ಪುಣೆಗೆ ಹೊರಟಿದ್ದ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಏರಿ, ತನ್ನ ಆಸನದ ಪಕ್ಕದಲ್ಲೇ ಇದ್ದ ತುರ್ತು ನಿರ್ಗಮನ ಬಾಗಿಲನ್ನು ತೆರೆದಿದ್ದಾನೆ. ಇದರಿಂದ ಸಹಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾಗುವಂತಾಯಿತು ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ದೂರು ಕೊಟ್ಟಿದ್ದಾರೆ. ಈ ಕುರಿತು ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.