ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಂತ ಗುರುಕೃಷ್ಣ ಶಣೈ ಅವರನ್ನು ಎತ್ತಂಗಡಿ ಮಾಡಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.
ಈ ಕುರಿತು ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಸಿಇಓ ಆದೇಶ ಹೊರಡಿಸಿದ್ದು, ಶಿವಪುಕಾಶ್.ಬಿ.ಎಲ್., ಸಹಾಯಕ ಕೃಷಿ ನಿರ್ದೇಶಕರು, ಸಾಗರ ಇವರಿಗೆ ಆಡಳಿತಾತ್ಮಕ ಹಿತ ದೃಷ್ಟಿಯಿಂದ ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯಿತಿ, ಸಾಗರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ವಹಿಸಿ ಆದೇಶಿಸಿದ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾಲ್ಲೂಕು ಪಂಚಾಯತ್, ಸಾಗರ ಹುದ್ದೆಯ ಪುಭಾರವನ್ನು ಗುರುಕೃಷ್ಣ ಎಂ ಶೆಣೈ, ಕಾರ್ಯನಿರ್ವಾಹಕ ಅಧಿಕಾರಿ(ಪ್ರಭಾರ) ಇವರಿಂದ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು