ಬೆಂಗಳೂರು : ಒಂದೇ ಗ್ರಾಮ ಪಂಚಾಯತಿಯಲ್ಲಿ ಐದು ವರ್ಷಕ್ಕೂ ಮೇಲ್ಪಟ್ಟು ಸೇವೆ ಸಲ್ಲಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಒಟ್ಟು 1,571 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮೊದಲ ಬಾರಿಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ನಡೆಸಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆರವರು ದಿನಾಂಕ: 03.09.2025ರಂದು ಚಾಲನೆ ನೀಡಿದ್ದು. ದಿನಾಂಕ:15.09.2025ರಂದು ವರ್ಗಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುತ್ತದೆ.
ವಿಶೇಷ ಪ್ರಕರಣಗಳ ಅಡಿಯಲ್ಲಿ 359, ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಮೂಲಕ 1,064 ಹಾಗೂ ಸಾಮಾನ್ಯ ಕೋರಿಕೆ ವರ್ಗಾವಣೆಯಡಿ 148 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಟ್ಟಾರೆಯಾಗಿ 1,571 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಿ ಆದೇಶ ಪತ್ರ ಹೊರಡಿಸಲಾಗಿರುತ್ತದೆ.
ಇಲಾಖೆಯು ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ, ದಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲಾಯಿತು.