ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೇ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಬೆಳಗಾವಿಯಲ್ಲಿ ಕಳೆದ ಒಂದು ಗಂಟೆಗಳಿಂದ ಭಾರಿ ಮಳೆ ಆಗುತ್ತಿದ್ದು ಜಿಲ್ಲೆಯ ಚಿಕ್ಕೋಡಿ ತಾಲೂಕಲ್ಲಿ ಕಳೆದ ಒಂದು ಗಂಟೆಯಿಂದ ಭಾರಿ ಮಳೆ ಸುರಿಯುತ್ತಿದೆ.
ಭಾರಿ ಮಳೆಯಿಂದಾಗಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ.ರಸ್ತೆಯ ಮೇಲೆ ನೀರು ನದಿಯಂತೆ ಹರಿಯುತ್ತಿದ್ದು ಜನರು ಪರದಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಹುಕ್ಕೇರಿ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಸುತ್ತಿದೆ ಇನ್ನು ನಿರಂತರವಾಗಿ ಮಳೆ ಸುರಿಸುತ್ತಿರುವುದರಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.