ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನಕ್ಕೆ ಇದೀಗ ಸರ್ಕಾರ ಪರಿಹಾರ ನಿಗದಿ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ನಿಗದಿ ಮಾಡಿದ್ದು ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನಿಗದಿ ಮಾಡಿದೆ ಎಂದು ವಿಧಾನಸೌಧದಲ್ಲಿ HK ಪಾಟೀಲ್ ತಿಳಿಸಿದರು.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು . ಒಣ ಭೂಮಿಗೆ ಎಕರೆಗೆ 30 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿದೆ. ಅಲ್ಲದೇ ಕೃಷಿ ಭೂಮಿಗೆ 40 ಲಕ್ಷ ರೂಪಾಯಿ ಪರಿಹಾರ ನಿಗದಿ ಮಾಡಿದೆ. ಪರಿಹಾರ ಮೊತ್ತ ನಿಗದಿ ಮಾಡಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.ಕೃಷ್ಣಾ ಮೇಲ್ದಂಡೆ ಯೋಜನೆ ಪರಿಹಾರ ವಿಚಾರದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. ನೀರಾವರಿ ಯೋಜನೆಗಳ ಜಾರಿಗೆ ಸಿಎಂ, ಡಿಸಿಎಂಗೆ ವಿಶೇಷ ಕಾಳಜಿ ಇದೆ ಎಂದು ತಿಳಿಸಿದರು.a