ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಸರಣಿ ಬ್ಯಾಂಕ್ ದರೋಡೆ ಪ್ರಕರಣಗಳು ನಡೆದಿದ್ದವು. ಅಲ್ಲದೆ ಇತ್ತೀಚಿಗೆ ಅಷ್ಟೇ ವಿಜಯಪುರ ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ದರೋಡೆ ನಡೆದಿತ್ತು. ಇದರ ಬೆನ್ನಲ್ಲೇ ಇದೀಗ ಮತ್ತೆ ವಿಜಯಪುರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಗೆ ನುಗ್ಗಿ ದುಷ್ಕರ್ಮಿಗಳು ನಗದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಹೌದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ದರೋಡೆ ನಡೆದಿದೆ. ಮ್ಯಾನೇಜರ್ ಸಿಬ್ಬಂದಿ ಕೈ ಕಾಲು ಕಟ್ಟಿ ಹಾಕಿ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸಿದ್ದಾರೆ. ವಿಜಯಪುರದ ಚಡಚಣ ಪಟ್ಟಣದಲ್ಲಿ ಇಂದು ಈ ಒಂದು ಘಟನೆ ನಡೆದಿದೆ. ಸುಮಾರು 5ಕ್ಕೂ ಹೆಚ್ಚು ಮುಸುಕು ಧಾರಿಗಳು ಈ ಒಂದು ಕೃತ್ಯ ಎಸಗಿದ್ದು, ಕಂಟ್ರಿ ಪಿಸ್ತೂಲ್ ಹಾಗೂ ಮಾರಕಸ್ತ್ರಗಳನ್ನು ತೋರಿಸಿ ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿಗಳ ಕೈಕಾಲು ಕಟ್ಟಿ ಬ್ಯಾಂಕ್ ನಲ್ಲಿದ್ದ ನಗದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಹಾಗೂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.