ಬೆಂಗಳೂರು : ರಾಜ್ಯಾದ್ಯಂತ ಕಳೆದ ಸೆ.13ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದಾಖಲೆಯ ಒಟ್ಟು 1.11 ಕೋಟಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ, ಹೈಕೋರ್ಟ್ ನ್ಯಾ| ಅನು ಸಿವರಾಮನ್, ಲೋಕ ಅದಾಲತ್‌ಗಾಗಿ ಹೈಕೋರ್ಟ್ ಒಟ್ಟು 989 ಪೀಠಗಳನ್ನು ಸ್ಥಾಪಿಸಲಾಗಿತ್ತು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳೂ ಸೇರಿ ದಾಖಲೆಯ ಒಟ್ಟು 1.11 ಕೋಟಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿ, ಸಂಬಂಧಪಟ್ಟವರಿಗೆ 3,997 ಕೋಟಿ ರೂ.ಪರಿಹಾರ ಕೊಡಿಸಲಾಗಿದೆ ಎಂದು ಹೇಳಿದ್ದಾರೆ.








