ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಯ ಶೌಚಗೃಹದ ಬಕೆಟ್ ನಲ್ಲಿ ಮಂಗಳವಾರ ನವಜಾತ ಹೆಣ್ಣು ಶಿಶುವೊಂದು ಪತ್ತೆ ಆಗಿದೆ.
ಹೊನ್ನಾಳಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದಾರೆ. ಆಗ ತಾನೆ ಹುಟ್ಟಿದ ಶಿಶುವನ್ನು ಯಾರೋ ಬಟ್ಟೆಯಲ್ಲಿ ಸುತ್ತಿ ಶೌಚಗೃಹದ ಬಕೆಟ್ನಲ್ಲಿ ಹಾಕಿ ಹೋಗಿದ್ದು, ಮಗು ಅಳುವ ಶಬ್ದ ಕೇಳಿದ ಸ್ವಚ್ಛತಾ ಸಿಬ್ಬಂದಿ ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ.
ವೈದ್ಯರು ಹಾಗೂ ಇತರ ಸಿಬ್ಬಂದಿ ಬಂದು ನೋಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಹೊನ್ನಾಳಿ ಠಾಣೆಯಲ್ಲಿ ದೂರು ನೀಡಲಾಗಿದೆ.