ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000/- ನೀಡುವ ಯೋಜನೆಯು ಜಾರಿಯಲ್ಲಿದ್ದು, ಆರ್ಹ ಹಾಗೂ ಆಸಕ್ತಿಯುಳ್ಳ ವಧು ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದವರಿಂದ ಅರ್ಜಿ ಆಹ್ವಾನಿಸಿದೆ.
ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿAದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಅರ್ಹತೆ: ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5.00 ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ
ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.