ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಮೋದಿ ನಾಯಕತ್ವವನ್ನು ಶ್ಲಾಘಿಸಿದ್ದಾರೆ.
ಟ್ರೂತ್ ಸೋಷಿಯಲ್ ಲ್ಲಿ ಟ್ರಂಪ್, ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ಪ್ರಯತ್ನಗಳಿಗೆ ನೀಡಿದ ಬೆಂಬಲಕ್ಕಾಗಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು ಎಂದು ಹೇಳಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಅವರ 75ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಅಮೆರಿಕ ಅಧ್ಯಕ್ಷರ ಆತ್ಮೀಯ ಶುಭಾಶಯಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಬದ್ಧನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದರು ಮತ್ತು ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದ ಬಗ್ಗೆಯೂ ಮಾತನಾಡಿದರು.