ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಕಲಬುರಗಿಯಲ್ಲಿ ಇಂದು 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,7 ಜಿಲ್ಲೆಗಳಲ್ಲಿ 204 ಕೋಟಿ ರೂ.ವೆಚ್ಚದಲ್ಲಿ ವಸತಿ ಶಾಲೆಗಳ ನಿರ್ಮಾಣ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 100 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಹೈದರಾಬಾದ್-ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಲಬುರಗಿ ನಗರದ ಡಿಎಆರ್ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯಗೆ ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ಸಲ್ಲಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದೆ. ಒಂದು ವಾರದಲ್ಲಿ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಹೈದ್ರಾಬಾದ್ ನಿಜಾಮರ ಆಳ್ವಿಕೆಗೊಳಪಟ್ಟಿದ್ದ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಸ್ವತಂತ್ರಗೊಂಡು, ಭಾರತ ಒಕ್ಕೂಟ ವ್ಯವಸ್ಥೆಯನ್ನು ಕೂಡಿಕೊಂಡ ಈ ದಿನ ಕನ್ನಡಿಗರ ಪಾಲಿಗೆ ಅತ್ಯಂತ ಸ್ಮರಣೀಯ ದಿನ. ಅಖಂಡ ಭಾರತ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನಗೈದ ಎಲ್ಲಾ ಮಹಾಚೇತನಗಳನ್ನು ಈದಿನ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದಿದ್ದಾರೆ.
ಪುಷ್ಪ ನಮನ
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾದ ಇದು ನಮ್ಮ ಪಾಲಿಗೆ ಐತಿಹಾಸಿಕ ದಿನ. ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾದ ಇದು… pic.twitter.com/XwQmwX17tC
— Siddaramaiah (@siddaramaiah) September 17, 2025