ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರಗಳ್ಳರ ಅಟ್ಟಹಾಸ ಮುಂದುವರೆದಿದ್ದು, ಲಾಂಗ್ ಹಿಡಿದು ಮಹಿಳೆಯಿಂದ ಖದೀಮನೊಬ್ಬ ಸರ ಕದ್ದಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯ ಆರ್ ಬಿಐ ಲೇಔಟ್ ನಲ್ಲಿ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ ಬಳಿ ಹೋಗುವ ಖದೀಮ, ಅವರಿಗೆ ಲಾಂಗ್ ತೋರಿಸಿ ಸರಗಳ್ಳತನ ಮಾಡಿದ್ದಾನೆ.
ಸಿಸಿಟಿವಿಯಲ್ಲಿ ಖದೀಮನ ಭಯಾನಕ ದೃಶ್ಯ ಸೆರೆಯಾಗಿದೆ. ಸದ್ಯ ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.