ಬೆಂಗಳೂರು : ಮುಡಾ ಹಗರಣಕ್ಕೆ ಸಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಮಧ್ಯಂತರ ಜಾಮೀನು ಅರ್ಜಿಯನ್ನು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.
ಮಾಜಿ ಆಯುಕ್ತ ದಿನೇಶ್ ಕುಮಾರ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ದಿನೇಶ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಇದೀಗ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ದಿನೇಶ್ ರನ್ನು 9 ದಿನಗಳ ಕಾಲ ED ಕಸ್ಟಡಿಗೆ ನೀಡಿ ಆದೇಶ ಹೋರಡಿಸಿತು.