ಕಲಬರುಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದ್ದು, ರಾಜ್ಯಾದ್ಯಂತ 5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಈಗ 120ಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ ಅಪ್ಗಳಿಗೆ ಕಲಬುರಗಿ ನೆಲೆಯಾಗಿದೆ. ಇದರಿಂದಾಗಿ ಈ ಭಾಗದ ಪ್ರತಿಭಾವಂತರ ವಲಸೆಯನ್ನು ತಡೆಯಲು ತಕ್ಕಮಟ್ಟಿಗೆ ಸಾಧ್ಯವಾಗಿದೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ಅಪ್ ಗಳನ್ನು ಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ [ ಲೀಪ್] ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ… pic.twitter.com/O2ADqoo6P5
— Siddaramaiah (@siddaramaiah) September 17, 2025