ಕಲಬುರಗಿ : ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಸಿಹಿಸುದ್ದಿ, ಬೆಳೆ ಹಾನಿ ಹಿನ್ನೆಲೆಯಲ್ಲಿ ರೈತರು ಸಾಲ ಮನ್ನಾ ಮಾಡುವಂತೆ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳೆಹಾನಿ ಹಿನ್ನೆಲೆಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ವಾರದಲ್ಲಿ ಜಂಟಿ ಸಮೀಕ್ಷೆಯ ಅಂತಿಮ ವರದಿ ಬಂದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು ಎಂದರು.
ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ. 175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.
ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ. ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು ಎಂದರು.
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು.
ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17… pic.twitter.com/Uwj1wGQK55
— Siddaramaiah (@siddaramaiah) September 17, 2025