ಬೆಂಗಳೂರು : ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು ಅರೋಪಿಸಿ ಹೈಕೋರ್ಟ್ ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿವೆ
ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ, ಜಾತಿ ಉಪಜಾತಿಗಳ ನಡುವೆ ಸರ್ಕಾರ ಎತ್ತಿ ಕಟ್ಟುತ್ತಿದೆ ಎಂದು ಆರೋಪಿಸಿ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರಿಂದ ಹೈಕೋರ್ಟ್ ಪಿಐಎಲ್ ಸಲ್ಲಿಕೆಯಾಗಿದೆ.
15 ದಿನಗಳಲ್ಲಿ ರಾಜ್ಯ ಸರ್ಕಾರವು ತರಾತುರಿಯಲ್ಲಿ ಜಾತಿಗಣತಿ ನಡೆಸುತ್ತಿದೆ. ಅದರಲ್ಲೂ ದಸರಾ ರಜೆ ದಿನಗಳಲ್ಲಿ ಜಾತಿಗಣತಿ ನಡೆಸುತ್ತಿದೆ. ಜನರು ಹಬ್ಬ, ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವಾಗ ಜಾತಿಗಣತಿ ನಡೆಸುವುದು ಸರಿಯಲ್ಲ. ಸರ್ಕಾರ 1500 ಉಪಜಾತಿಗೂ ಪ್ರತ್ಯೇಕ ಅಸ್ತಿತ್ವ ನೀಡುತ್ತಿದೆ. ಜಾತಿಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಹೀಗಾಗಿ ರಾಜ್ಯ ಸರ್ಕಾರದ ನಿರ್ಧಾರ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.