ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಈ ಒಂದು ಸಂಪುಟ ಸಭೆಯಲ್ಲಿ ದೌರ್ಜನಕ್ಕೆ ಒಳಗಾಗಿ ಮೃತಪಟ್ಟಿರುವ ಎಸ್ಸಿ ಎಸ್ಟಿ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಹೌದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ತೀರ್ಮಾನ ತೆಗೆದುಕೊಳ್ಳಲಾಯಿತು. ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್ಸಿ ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ನೌಕರಿಗೆ ಸಂಪುಟ ಸಭೆ ಇದೀಗ ಒಪ್ಪಿಗೆ ನೀಡಿದೆ. ಗ್ರೂಪ್ ಸಿ, ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. DPAR ನಿಯಮಾವಳಿಗೆ ತಿದ್ದುಪಡಿ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.