ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ, ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡೋದಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯಲ್ಲಿ ದೌರ್ಜನ್ಯಕ್ಕೊಳಗಾದಂತ ಎಸ್ಸಿ, ಎಸ್ಟಿ ಸಮುದಾಯದ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ನೌಕರಿ ನೀಡುವಂತ ನಿರ್ಧಾರಕ್ಕೆ ಸಮ್ಮತಿಸಿದೆ.
ಗ್ರೂಪ್-ಸಿ, ಗ್ರೂಪ್-ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ಎಸ್ಸಿ, ಎಸ್ಟಿ ವ್ಯಕ್ತಿಯ ದೌರ್ಜನ್ಯಕ್ಕೊಳಗಾದಂತ ಅವಲಂಬಿತರಿಗೆ ನೀಡಲು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣ: ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ