ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿ ಇಬ್ಬರು ಸಾವನಪ್ಪಿದ್ದಾರೆ. ಕಂಚಿನ ಬಾಗಿಲು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಎಂಬಲ್ಲಿ ಅಪಘಾತ ಸಂಭವಿಸಿದೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ದಿಂದ ಲಾರಿ ಯಲ್ಲಾಪುರ ಕಡೆಗೆ ತೆರಳುತ್ತಿತ್ತು. ಈ ವೇಳೆ KSRTC ಬಸ್ ಲಾರಿ ಮಧ್ಯ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕ ಮತ್ತು ಬಸ್ ನಲ್ಲಿ ಇದ್ದಂತ ಓರ್ವ ಪ್ರಯಾಣಿಕ ಸಾವನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲೂಕು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.