ಉತ್ತರ ಕನ್ನಡ: ಜಿಲ್ಲೆಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
ಅಂಕೋಲಾದಿಂದ ಯಲ್ಲಾಪುರ ಕಡೆಗೆ ಲಾರಿ ತೆರಳುತ್ತಿತ್ತು. ಈ ಅಪಘಾತದಲ್ಲಿ ಲಾರಿ ಚಾಲಕ, ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಅಂಕೋಲಾ ತಾಲ್ಲೂಕಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸ್ ಸೀಟಿಗೆ ಆಪ್ಷನ್ಸ್ ಮರುಕ್ರಮಕ್ಕೆ ಸಮಯ ವಿಸ್ತರಣೆ
Good News ; ಪಿಂಚಣಿದಾರರಿಗೆ ಶುಭ ಸುದ್ದಿ ; ಅ. 1ರಿಂದ ‘NPS’ ನಿಯಮ ಬದಲಾವಣೆ, ಅನೇಕ ಪ್ರಯೋಜನ!