ಗದಗ : ಗದಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕಾರು ಒಂದಕ್ಕೆ ಗೋವಾ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ರವಿ ನೆಲ್ಲೂರು ಅರ್ಜುನ್ ನೆಲ್ಲೂರು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ ಮೃತಪಟ್ಟವರು ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದ ಕುರಿತು ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.