ಬೆಂಗಳೂರು : ಇಂದಿನಿಂದ ಒಂದು ವಾರ ರಾಜ್ಯಾದ್ಯಂತ ಮುಂದಿನ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಕರಾವಳಿ ಹಾಗೂ ಒಳನಾಡಿನ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.19ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.