ವಿಜಯಪುರ : ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ನಿನ್ನೆ ಒಂದೇ ದಿನದಲ್ಲಿ ಸಿಂದಗಿ ಪಟ್ಟಣದ ಸುತ್ತಮುತ್ತ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಮಧ್ಯಾಹ್ನ 3 ಗಂಟೆ, ರಾತ್ರಿ 10:11, ಮತ್ತೆ ರಾತ್ರಿ 10:25, ಮತ್ತೊಮ್ಮೆ ರಾತ್ರಿ 10:47 ಒಟ್ಟು 4 ಬಾರಿ ಭೂಮಿ ಕಂಪನಿಸಿದಂತೆ ಭಾಸವಾಗಿದೆ.ಹೀಗಾಗಿಸಿಂದಗಿ ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ.