Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳೆಯರೇ ಗಮನಿಸಿ : ಅಡುಗೆಗೆ ಯಾವ `ಎಣ್ಣೆ’ ಉತ್ತಮ? ಯಾವುದು ಕೆಟ್ಟದು? ಇಲ್ಲಿದೆ ಸಂಪೂರ್ಣ ಮಾಹಿತಿ

05/02/2026 10:05 AM

ಉತ್ತರಕನ್ನಡದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 ‘SDPI’ ಕಾರ್ಯಕರ್ತರಿಗೆ 10 ವರ್ಷ ಕಠಿಣ ಶಿಕ್ಷೆ

05/02/2026 10:03 AM

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ `ಇ-ಮೇಲ್’ ಸಂದೇಶ |Bomb Threat

05/02/2026 10:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow0920/09/2025 7:27 AM

ಬೆಂಗಳೂರು: ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ.

ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ. ಅಲ್ಲದೇ, Code of Criminal Procedure, 19730 do 147 ರನ್ವಯ ‘ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ’ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲ್ಲೂಕಿನ ತಹಶೀಲ್ದಾರ್‌ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಮಹಿಳೆಯರೇ ಗಮನಿಸಿ : ಅಡುಗೆಗೆ ಯಾವ `ಎಣ್ಣೆ’ ಉತ್ತಮ? ಯಾವುದು ಕೆಟ್ಟದು? ಇಲ್ಲಿದೆ ಸಂಪೂರ್ಣ ಮಾಹಿತಿ

05/02/2026 10:05 AM2 Mins Read

ಉತ್ತರಕನ್ನಡದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 ‘SDPI’ ಕಾರ್ಯಕರ್ತರಿಗೆ 10 ವರ್ಷ ಕಠಿಣ ಶಿಕ್ಷೆ

05/02/2026 10:03 AM1 Min Read

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ `ಇ-ಮೇಲ್’ ಸಂದೇಶ |Bomb Threat

05/02/2026 10:00 AM1 Min Read
Recent News

ಮಹಿಳೆಯರೇ ಗಮನಿಸಿ : ಅಡುಗೆಗೆ ಯಾವ `ಎಣ್ಣೆ’ ಉತ್ತಮ? ಯಾವುದು ಕೆಟ್ಟದು? ಇಲ್ಲಿದೆ ಸಂಪೂರ್ಣ ಮಾಹಿತಿ

05/02/2026 10:05 AM

ಉತ್ತರಕನ್ನಡದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 ‘SDPI’ ಕಾರ್ಯಕರ್ತರಿಗೆ 10 ವರ್ಷ ಕಠಿಣ ಶಿಕ್ಷೆ

05/02/2026 10:03 AM

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ `ಇ-ಮೇಲ್’ ಸಂದೇಶ |Bomb Threat

05/02/2026 10:00 AM

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM
State News
KARNATAKA

ಮಹಿಳೆಯರೇ ಗಮನಿಸಿ : ಅಡುಗೆಗೆ ಯಾವ `ಎಣ್ಣೆ’ ಉತ್ತಮ? ಯಾವುದು ಕೆಟ್ಟದು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5705/02/2026 10:05 AM KARNATAKA 2 Mins Read

ತರಕಾರಿ, ಪರಾಟ ಅಥವಾ ಇನ್ನಾವುದೇ ಖಾದ್ಯವನ್ನು ಬೇಯಿಸುವಾಗ ಅಡುಗೆ ಎಣ್ಣೆಯೇ ಮೊದಲ ಆಯ್ಕೆ. ಆದರೆ ನೀವು ಕುರುಡಾಗಿ ಸೂಪರ್ ಮಾರ್ಕೆಟ್ನಿಂದ…

ಉತ್ತರಕನ್ನಡದಲ್ಲಿ ಬಿಜೆಪಿ ಮುಖಂಡನ ಕೊಲೆ ಯತ್ನ ಪ್ರಕರಣ : 6 ‘SDPI’ ಕಾರ್ಯಕರ್ತರಿಗೆ 10 ವರ್ಷ ಕಠಿಣ ಶಿಕ್ಷೆ

05/02/2026 10:03 AM

BREAKING : ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ `ಇ-ಮೇಲ್’ ಸಂದೇಶ |Bomb Threat

05/02/2026 10:00 AM

ಬಿಳಿಹಾಳೆ ಹಾಗು ಕೆಂಪು ಪೆನ್ನಿನಿಂದ ಧನದ ಅಭಿವೃದ್ಧಿಯನ್ನು ಹೇಗೆ ಮಾಡಿಕೊಳ್ಳಬಹುದು ಗೊತ್ತೇ ?

05/02/2026 10:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.