ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ಅಡಿಯಲ್ಲಿ ಸಾವಿರಾರು ನೌಕರರು ಗುತ್ತಿಗೆ ಆಧಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸರ್ಕಾರಿ ನೌಕರರಿಗೆ ನೀಡುವಷ್ಟು ವೇತನ ನೀಡದೇ ತಾರತಮ್ಯ ಧೋರಣೆ ತಾಳಲಾಗಿದೆ. ಇದೀಗ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕರ್ನಾಟಕದ ಆರೋಗ್ಯ ಇಲಾಖೆಯಲ್ಲಿ NHM ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ವೇತನ ತಾರತಮ್ಯ ಮಾಡಲಾಗುತ್ತಿದೆ. ಸರ್ಕಾರಿ ನೌಕರರಿಗೆ ಒಂದು ರೀತಿಯ ವೇತನ ನೀಡುತ್ತಿದ್ದರೇ, NHM ಗುತ್ತಿಗೆ ನೌಕರರಿಗೆ ಮತ್ತೊಂದು ರೀತಿಯಾಗಿ ಕಡಿಮೆ ವೇತನ ನೀಡಲಾಗುತ್ತಿದೆ. ಒಂದೇ ಕೆಲಸಕ್ಕೆ ಸರ್ಕಾರಿ ಮತ್ತು ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯವಿದೆ. ಇದನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ( KSHCOE ) ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ಪತ್ರವನ್ನು ಬರೆಯಲಾಗಿತ್ತು.
ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಕರ್ನಾಟಕದ ಎನ್ ಹೆಚ್ ಎಂ ಅಭಿಯಾನ ನಿರ್ದೇಶಕರಾದಂತ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರಿಗೆ ಪತ್ರ ಬರೆದಿದೆ. ಅದರಲ್ಲಿ ದಿನಾಂಕ 03-09-2025ರಂದು ಇ-ಮೇಲ್ ಮೂಲಕ KSHCOE BMS ಪತ್ರ ಬರೆದಿದೆ. ಕರ್ನಾಟಕದಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರ ವೇತನದಲ್ಲಿ ತಾರತಮ್ಯವಿದೆ. ಸಾಮಾಜಿಕ ಭದ್ರತೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಗಮನ ಸೆಳೆಯಲಾಗಿದೆ ಎಂದಿದೆ.
ಈ ಪತ್ರದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿನ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರ ವೇತನ ತಾರತಮ್ಯದ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮವಹಿಸಲು ತಿಳಿಸಲಾಗಿದೆ. ಈ ಮೂಲಕ ಆರೋಗ್ಯ ಇಲಾಖೆಯಲ್ಲಿ ಒಂದೇ ಕೆಲಸಕ್ಕೆ ಸರ್ಕಾರಿ ನೌಕರರಿಗೊಂದು ವೇತನ, ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಕಡಿಮೆ ವೇತನ ನಿವಾರಣೆಗೆ ಸೂಚಿಸಲಾಗಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸೂಚನೆಯಂತೆ ಎನ್ ಹೆಚ್ ಎಂ ಗುತ್ತಿಗೆ ನೌಕರರ ವೇತನ ತಾರತಮ್ಯವನ್ನು ನಿವಾರಿಸಿ ಗುಡ್ ನ್ಯೂಸ್ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ರಾಜ್ಯದ ಜನತೆಗೆ ಗುಡ್ ನ್ಯೂಸ್: 10 ತಾಲ್ಲೂಕಲ್ಲಿ ಯೋಗ, ಪ್ರಕೃತಿ ಚಿಕಿತ್ಸಾ ಕೇಂದ್ರ ತೆರೆಯಲು ಸರ್ಕಾರ ಆದೇಶ
ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ