ಬೆಂಗಳೂರು: “ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಜಾತಿಗಣತಿ ವಿಚಾರವಾಗಿ ಸರ್ಕಾರದ ವಿರುದ್ಧ ಟೀಕೆ ವ್ಯಕ್ತವಾಗುತ್ತಿವೆ ಎಂದು ಕೇಳಿದಾಗ, “ಬಿಜೆಪಿ ಹಾಗೂ ಬೇರೆ ಪಕ್ಷದವರು ಷಡ್ಯಂತ್ರ ರೂಪಿಸಿ, ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ. ಜಾತಿಗಳ ಪಟ್ಟಿಯಲ್ಲಿ ಅಕ್ಷರಗಳ ಆಧಾರದ ಮೇಲೆ ಸಮುದಾಯಗಳನ್ನು ಪಟ್ಟಿ ಮಾಡಲಾಗಿದೆ. ಪ್ರತಿ ಮನೆ ಮನೆಗೆ ಹೋಗಿ, ಎಲ್ಲರ ಮಾಹಿತಿ ಸಂಗ್ರಹಿಸುತ್ತೇವೆ.” ಎಂದು ತಿಳಿಸಿದರು.
ಮೇಲ್ಮನೆ ಮಾಜಿ ಸಭಾಪತಿ ಸುದರ್ಶನ್ ಅವರು ತಮ್ಮ ಭಾಷಣದಲ್ಲಿ ನಿಮಗೆ ಕೆಲವು ಸಲಹೆ ನೀಡಿದ್ದಾರಲ್ಲ ಎಂದು ಕೇಳಿದಾಗ, “ಅವರು ಸಲಹೆ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ನಿಮ್ಮ ಸಲಹೆಯನ್ನು ತಿಳಿಸಿ ಎಂದು ಅವರಿಗೆ ಹೇಳಿದ್ದೇವೆ. ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ನಾವು ಈ ವಿಚಾರವಾಗಿ ಚರ್ಚೆ ಮಾಡುತ್ತೇವೆ” ಎಂದರು.
ಶಿವಮೊಗ್ಗ: ಜಾತಿ ಸಮೀಕ್ಷೆ ವೇಳೆ ಧರ್ಮದ ಬಳಿ ಹಿಂದೂ, ಕಲಂ 2ರಲ್ಲಿ ಬ್ರಾಹ್ಮಣನೆಂದು ನಮೂದಿಸಿ- ಪ್ರಕಾಶ್ ತಲಕಾಲಕೊಪ್ಪ
ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ