ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,. 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪೂರ್ಣಗೊಂಡಿದೆ. 402 ಪಿಎಸ್‌ಐ ಹುದ್ದೆಗಳಲ್ಲಿ ಈಗಾಗಲೇ 398 ಹುದ್ದೆಗಳಿಗೆ ಆದೇಶ ಹೊರಡಿಸಲಾಗಿದ್ದು, ಗೃಹ ಇಲಾಖೆಯಲ್ಲಿ ಖಾಲಿ ಇರುವ 15,000 ಪೇದೆ ಹುದ್ದೆಗಳ ನೇಮಕಾತಿಗಾಗಿ ವೇಳಾಪಟ್ಟಿ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಡ್ರಗ್ಸ್ ಹಾವಳಿ ಬಗ್ಗೆ ಚರ್ಚೆ ಮಾಡಲಾಗಿದ್ದು, ನಿಯಂತ್ರಣಕ್ಕೆ ಸೂಚಿಸಲಾಗಿದೆ. ಡ್ರಗ್ ಪೆಡ್ಲರ್ ಜತೆ ನಂಟು ಸಂಬಂಧ 11 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ವಿಚಾರಣೆ ಮಾಡಿ ಬಳಿಕ ವಜಾ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.