ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಸೆ.23ರವರೆಗೆ ವ್ಯಾವಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 22 ಮತ್ತು 23 ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.