ಕಲಬುರ್ಗಿ : ಕಲ್ಬುರ್ಗಿಯಲ್ಲಿ ವ್ಯಕ್ತಿಯನ್ನು ಬೆತ್ತಲೆ ಮಾಡಿ ಕೊಲೆ ಮಾಡಲಾಗಿದೆ. ದೊನ್ನೆಯಿಂದ ಹೊಡೆದು ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ.ಕಲಬುರ್ಗಿ ನಗರದ ಆಳಂದ್ ಕಾಲೋನಿಯಲ್ಲಿ ಈ ಒಂದು ಭೀಕರ ಕೃತ್ಯ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ಚಾಂದ್ ಸಾಬ್ (38) ಎಂದು ತಿಳಿದು ಬಂದಿದೆ.
ಕೊಲೆಯಾದ ವ್ಯಕ್ತಿ ದೆಹಲಿಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ ನಿನ್ನೆ ರಾತ್ರಿ ಪರಿಚಿತರೊಂದಿಗೆ ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಹಂತಕರು ದೊಣ್ಣೆಯಿಂದ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಆರ್.ಜಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.