ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಲಿದ್ದು, ಇದರ ಮಧ್ಯ ಕ್ರಿಶ್ಚಿಯನ್ ಜಾತಿ ಪಟ್ಟಿಯಲ್ಲಿ, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಸೇರ್ಪಡೆ ಕುರಿತು ಇದೀಗ ರಾಜ್ಯಪಾಲ ಥಾವರ ಚೆಂದ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮರುಪರಿಶೀಲನೆ ಮಾಡಿ ಎಂದು ತಿಳಿಸಿದ್ದಾರೆ.
ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿದಂತೆ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಗೆಹ್ಲೊಟ್ ಹತ್ರ ಬರೆದಿದ್ದಾರೆ. ಕ್ರಿಶ್ಚಿಯನ್ ಹೊಸ ಜಾತಿಗಳ ಸೇರ್ಪಡೆಯಿಂದ ಸಾಮಾಜಿಕ ಧಕ್ಕೆ ಮತ್ತು ದೀರ್ಘಾವಧಿಯ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ. ಸಾಮಾಜಿಕ ವ್ಯವಸ್ಥೆಗೆ ಸಮಸ್ಯೆಯಾಗದಂತೆ ಮರುಪರಿಶೀಲಿಸುವಂತೆ ಇದೀಗ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.