ಬೆಂಗಳೂರು: ಪಿಡಿಒ ಜೇಷ್ಠಾತಾ ಪಟ್ಟಿಯನ್ನು ಪ್ರಕಟಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ.
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯಲ್ಲಿ ಕಳೆದ 12 ವರ್ಷಗಳಿಂದ ಎದುರಾಗಿರುವ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ನೈಸರ್ಗಿಕ ನ್ಯಾಯತತ್ವದಡಿ ಪಾರದರ್ಶಕವಾದ ಜೇಷ್ಠತಾಪಟ್ಟಿ ತಯಾರಿಸುವ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಡ್ವೊಕೇಟ್ ಜನರಲ್ ಹಾಗೂ ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಣ್‌ದೀಪ್ ಅವರೊಂದಿಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಚಾಲಕಿಯರಿಗೆ ವೇತನ ಪಾವತಿ ಮಾಡುವ ಸಂಬಂಧ ಇಲಾಖೆ ತೆಗೆದುಕೊಂಡಿರುವ ಕ್ರಮಗಳನ್ನು ಸಚಿವರು ಪರಿಶೀಲಿಸಿದರು. ಇ-ಸ್ವತ್ತು ನಿಯಮಾವಳಿಗಳನ್ನು ಆದಷ್ಟು ಶೀಘ್ರದಲ್ಲಿ ಅಂತಿಮಗೊಳಿಸಲೂ ಸಚಿವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.
ಮೈಸೂರು ದಸರಾ ಪ್ರಯುಕ್ತ 2,300ಕ್ಕೂ ಹೆಚ್ಚು KSRTCಯಿಂದ ವಿಶೇಷ ಬಸ್ ಸಂಚಾರದ ವ್ಯವಸ್ಥೆ
19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು