ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದಮೆ ಸಂಖ್ಯೆ 26/2023 0 182, 419, 464, 465 ಐ.ಪಿ.ಸಿ. ರಂತೆ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:20/09/2025ರ ಪತ್ರದಲ್ಲಿ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿನ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ 6670 ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬುದಾಗಿ ಚುನಾವಣಾ ಆಯೋಗಕ್ಕೆ ಮಾಜಿ ಶಾಸಕರಾಗಿದ್ದ ಶ್ರೀ. ಬಿ. ಆರ್. ಪಾಟೀಲ್ ರವರು ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಈ ಕುರಿತಂತೆ ಪರಿಶೀಲಿಸಿದಾಗ ಒಟ್ಟು 6018 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ವಿವಿಧ ಸರ್ಕಾರಿ ಆನ್‌ಲೈನ್ ಅಪ್ಲಿಕೇಷನ್‌ಗಳಿಗೆ ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 24 ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಪುರಸ್ಕರಿಸಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದು ಕಂಡು ಬಂದಿರುತ್ತದೆ.
ಆದರೆ, 5994 ಅರ್ಜಿಗಳನ್ನು ಪರಿಶೀಲಿಸಿದಾಗ ಸದರಿ ಅರ್ಜಿಗಳನ್ನು ಯಾರೋ, ಯಾವುದೋ ದುರುದ್ದೇಶದಿಂದ ವಿವಿಧ ಮೊಬೈಲ್ ಸಂಖ್ಯೆಗಳನ್ನು ಉಪಯೋಗಿಸಿ, ಮೂಲ ಮತದಾರರ ಗಮನಕ್ಕೆ ಬಾರದಂತೆ ಮತ್ತು ಗೊತ್ತಾಗದಂತೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡಲು ಅರ್ಜಿ ಸಲ್ಲಿಸಿರುವುದು ಕಂಡು ಬಂದಿರುವ ಬಗ್ಗೆ ದೂರುದಾರರಾದ ಶ್ರೀಮತಿ ಮಮತಾ ಕುಮಾರಿ ಕೆ.ಎ.ಎಸ್ ರವರು ವಿಚಾರಣೆ ಮಾಡಿ ದಿನಾಂಕ: 21.02.2023 ರಂದು ನೀಡಿದ ದೂರಿನ ಆಧಾರದ ಮೇಲೆ ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ: 26/2023 ಕಲಂ, 182, 419, 464, 465 ಐ.ಪಿ.ಸಿ ರಂತೆ ಪಕರಣ ದಾಖಲಾಗಿರುವುದಾಗಿ ವರದಿ ಮಾಡಿರುತ್ತಾರೆ.
ಸದರಿ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಇತರೆ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ಅಪರಾಧ ತನಿಖಾ ಸಂಸ್ಥೆಯಾದ ಸಿಐಡಿಯ ಪೊಲೀಸ್ ಮಹಾನಿರ್ದೇಶಕರು, ಸಿಐಡಿ, ಆರ್ಥಿಕ ಅಪರಾಧಗಳು ಮತ್ತು ವಿಶೇಷ ಘಟಕಗಳು ರವರ ಮೇಲ್ವಿಚಾರಣೆಯಲ್ಲಿ ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತನಿಖಾ ತಂಡ (Special Investigation Team) ರಚಿಸುವುದು ಸೂಕ್ತವೆಂದು ಶಿಫಾರಸ್ಸು ಮಾಡಿ, ಸದರಿ ವಿಶೇಷ ತನಿಖಾ ತಂಡಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 2(ಯು) ಅಡಿಯಲ್ಲಿ ಪೊಲೀಸ್ ಠಾಣೆಯೆಂದು ಘೋಷಿಸಿ, ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಯನ್ನು ನೀಡುವಂತೆ ಮತ್ತು ವಿಶೇಷ ತನಿಖಾ ತಂಡವು ತನ್ನ ತನಿಖಾ ವರದಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ-193ರಡಿ ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಲು ಅಧಿಕಾರ ನೀಡುವಂತೆ ಕೋರಿರುತ್ತಾರೆ ಎಂದಿದೆ.
1. ಬಿ.ಕೆ. ಸಿಂಗ್ ಐ.ಪಿ.ಎಸ್ -ಮುಖ್ಯಸ್ಥರು, ಅಪರ ಪೊಲೀಸ್ ಮಹಾನಿರ್ದೇಶಕರು, ಸಿ.ಐ.ಡಿ, ಬೆಂಗಳೂರು.
2. ಸೈದುಲು ಅದಾವತ್ ಐ.ಪಿ.ಎಸ್, ಸದಸ್ಯರು, ಪೊಲೀಸ್ ಅಧೀಕ್ಷಕರು, ಸಿ.ಸಿ.ಡಿ. ಸಿಐಡಿ, ಬೆಂಗಳೂರು.
3. ಶುಭಾನ್ವಿತ ಐ.ಪಿ.ಎಸ್. ಸದಸ್ಯರು, ಪೊಲೀಸ್ ಅಧೀಕ್ಷಕರು, ಎಸ್.ಇ.ಡಿ.ಸಿ.ಐ.ಡಿ, ಬೆಂಗಳೂರು.
ಪ್ರಸ್ತಾವನೆಯನ್ನು ಪರಿಶೀಲಿಸಿ, ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 26/2023 ಕಲಂ 182, 419 464 465 ಐ.ಪಿ.ಸಿ ಪುಕರಣದ ತನಿಖೆ ನಡೆಸಲು ಮೇಲ್ಕಂಡ ಅಧಿಕಾರಿಗಳನ್ನೊಳಗೊಂಡ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸುವುದು ಮತ್ತು ಸದರಿ ತನಿಖಾ ತಂಡಕ್ಕೆ ಠಾಣಾಧಿಕಾರವನ್ನು ಮತ್ತು ತನಿಖಾ ವರದಿಯನ್ನು ಸಕ್ಷಮ ನ್ಯಾಯಾಲಯಗಳಿಗೆ ಸಲ್ಲಿಸಲು ಅಧಿಕಾರ ನೀಡುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಸರ್ಕಾರವು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಕಲಬುರಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ಸಂಖ್ಯೆ: 26/2023 ಕಲಂ, 182, 419, 464, 465 ಐ.ಪಿ.ಸಿ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ರಾಜ್ಯದ ಅಪರಾಧ ತನಿಖಾ ಸಂಸ್ಥೆಯಾದ ಸಿಐಡಿಯಲ್ಲಿನ ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಆದೇಶಿಸಿದೆ.
ಸಾಗರದ ಮಾರಿಕಾಂಬಾ ದೇವಸ್ಥಾನ ಸರ್ವಸದಸ್ಯರ ಸಭೆ ಯಶಸ್ವಿ: ಶೀಘ್ರವೇ ಚುನಾವಣೆಗೆ ತೀರ್ಮಾನ
ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿ ದರ ರೂ.1 ಇಳಿಕೆ | Railway Water Bottle Price Cut