ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಇಂದು ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚೋ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು.
ನಿಮಗೆ ನಾಚಿಕೆ ಆಗಲ್ವ? ಎಂಬುದಾಗಿ ಕ್ಲಾಸ್ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ, ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರ್ತಾ ಇದೆ. ಮುಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಕಷ್ಟ ಗೊತ್ತಾಗಲ್ವ? ನಿಮ್ಮನ್ನು ಸಸ್ಪೆಂಡ್ ಮಾಡಿ, ಮನೆಗೆ ಕಳುಹಿಸಬೇಕಾಗುತ್ತದೆ ಎಂಬುದಾಗಿ ವಾರ್ನಿಂಗ್ ಮಾಡಿದರು. ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಶಿವಮೊಗ್ಗ: ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು
19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು