ತುಮಕೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ಇಬ್ಬರು ಮಕ್ಕಳನ್ನು ಕೊಲೆಗೈದಂತ ತಾಯಿಯೊಬ್ಬಳು, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ತುಮಕೂರಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಪಲಕೆರೆಯಲ್ಲಿ ಇಬ್ಬರು ಮಕ್ಕಳನ್ನು ಕೊಲೈಗೈದು ತಾಯಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳಾದಂತ ಕೌಶಿಕ್(4), ಯುಕ್ತಿ(1)ಯನ್ನು ಕೊಲೆಗೈದು ತಾಯಿ ಸರಿತಾ(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗಳು ಯುಕ್ತಿಯನ್ನು ಕತ್ತು ಕೊಯ್ದು ಬರ್ಬರವಾಗಿ ಕೊಂದಿದ್ದರೇ, ಪುತ್ರ ಕೌಶಿಕ್ ನನ್ನು ಉಸಿರುಗಟ್ಟಿಸಿ ಕೊಲೆಯನ್ನು ತಾಯಿ ಸರಿತಾ ಮಾಡಿ, ಆ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಂತ ಸಂದರ್ಭದಲ್ಲ ಈ ಘಟನೆ ನಡೆದಿದೆ.
ಆರು ವರ್ಷಗಳ ಹಿಂದೆ ಆಟೋ ಚಾಲಕ ಸಂತೋಷ್ ಜೊತೆಗೆ ಸರಿತಾ ವಿವಾಹವಾಗಿದ್ದರು.