ಶಿವಮೊಗ್ಗ : ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ್ಮ ಹಿರೇನಾಯ್ಕ್ (91) ನಿಧನರಾಗಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಶನಿವಾರ ನಿಧನ ಹೊಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್(19) ವಯೋ ಸಹಜತೆಯಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.
ಇಂದು ಮದ್ಯಾಹ್ನ 2 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ತಾಯಿ ಮಂಜಮ ಹಿರೇನಾಯ್ಕ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು