ಹಾಸನ : ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಪುರಸಭೆ ಆವರಣದಲ್ಲಿರುವ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದೇವಸ್ಥಾನಕ್ಕೆ ಮುಖ ಮುಚ್ಚಿಕೊಂಡು ಮಹಿಳೆ ಒಬ್ಬಳು ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದು ಇದೇ ಮಹಿಳೆ ಎಂದು ಅನುಮಾನ ವ್ಯಕ್ತವಾಗುತ್ತಿದೆ. ಮಹಿಳೆಯ ಮೇಲೆ ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಪೂರಕವೆಂಬಂತೆ ಮಹಿಳೆ ದೇವಸ್ಥಾನದ ಒಳಗಡೆ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಇನ್ನು ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.