ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆ ನಡೆದಿದ್ದು, ಗೆಜ್ಜೆಗದಹಳ್ಳಿಯಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ.
ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳಿಂದ ಬೀರಪ್ಪ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇದೀಗ ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಬೀರಪ್ಪ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.