ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 600 ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಒಂದು ಸಾರ್ವಜನಿಕ ಸೇವಾ ನಿರತ ಇಲಾಖೆಯಾಗಿದ್ದು, ಶುಶೂಷಾಧಿಕಾರಿ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ವೃಂದದ ಅರೆ ವೈದ್ಯಕೀಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿಯನ್ನು ಕೋರುತ್ತಾ, ನೇರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.
ಆಯುಕ್ತಾಲಯದ ದಿನಾಂಕ: 01/09/2023ರ ಪುಸ್ತಾವನೆಗೆ ಸಂಬಂಧಿಸಿದಂತೆ ಮೇಲೆ ಓದಲಾದ ಕ್ರಮಾಂಕ(2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 1205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಹಾಗೂ 300 ಆರೋಗ್ಯ ನಿರೀಕ್ಷಣಾಧಿಕಾರಿಗಳ ಹುದ್ದೆಗಳನ್ನು ಕೆಲವೊಂದು ಷರತ್ತಿಗೊಳಪಟ್ಟು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಸರ್ಕಾರವು ಅನುಮತಿ ನೀಡಿ ಆದೇಶಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಎದುರಾಗಿ 400 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ 400 ಫಾರ್ಮಸಿಸ್ಟ್ ಹುದ್ದೆಗಳನ್ನು ಕೆಲವೊಂದು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಮಾತ್ರ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿ ಆದೇಶಿಸಲಾಗಿದೆ.
ಮುಂದುವರೆದು, ಸಾರ್ವಜನಿಕರಿಗೆ/ಜನ ಸಮುದಾಯಕ್ಕೆ ಉತ್ತಮ ಆರೋಗ್ಯ ಸೇವೆಯನ್ನು ಸಕಾಲದಲ್ಲಿ ನೀಡಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಮಂಜೂರಾಗಿ ಪ್ರಸ್ತುತ ಖಾಲಿ ಇರುವ ಶುಶೂಷಾಧಿಕಾರಿ ವೃಂದದಲ್ಲಿನ ತೀವು ಅಗತ್ಯವಿರುವ ಖಾಲಿ ಸ್ಥಾನ/ ಹುದ್ದೆಗಳನ್ನು ಆದ್ಯತೆ ಮೇಲೆ ಭರ್ತಿ ಮಾಡಲು ಇಲಾಖೆಯಲ್ಲಿ ಖಾಲಿ ಇರುವ ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಲ್ಲಿ, ತಗಲುವ ಆರ್ಥಿಕ ವೆಚ್ಚದ ವಿವರವನ್ನು ಈ ಕೆಳಕಂಡಂತೆ ಆಯುಕ್ತಾಲಯದಿಂದ ಮಾಹಿತಿ ಸ್ವೀಕರಿಸಲಾಗಿದ್ದು, ಸದರಿ ವೆಚ್ಚವನ್ನು ರಾಜ್ಯ ವಲಯದ ಲೆಕ್ಕಶೀರ್ಷಿಕೆ: 2210-01-110-1-22 ರ ಉಪಲೆಕ್ಕ ಶೀರ್ಷಿಕೆ:034 (ಗುತ್ತಿಗೆ/ ಹೊರಗುತ್ತಿಗೆ) ಅಡಿ ಭರಿಸಬಹುದಾಗಿದೆ ಎಂದು ಸಹ ತಿಳಿಸಿರುತ್ತಾರೆ.
ಹೀಗಿದೆ ವೇತನ ಪಾವತಿ ವಿವರ
- ಬೇಸಿಕ್ ಹಾಗೂ ವಿಡಿಎ – ರೂ.17,435
- ಇಪಿಎಫ್ ಶೇ.13 – ರೂ.2,267
- ಇಎಸ್ಐ ಶೇ.3.25 – ರೂ.567
- ಒಟ್ಟು ರೂ.20,268
- ಇದರಲ್ಲಿ ಸರ್ವಿಸ್ ಚಾರ್ಜ್ ರೂ.405 ಕಡಿತವಾಗಿ ರೂ.20,674 ನಿಗದಿಪಡಿಸಿದೆ.
- ಶೇ.18ರಷ್ಟು ಜಿಎಸ್ಟಿ – ರೂ.3,721.
- ಸ್ಟಾಫ್ ನರ್ಸ್ ಒಟ್ಟು ವೇತನ ರೂ.24,395
ಈ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ 600 ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ನಿರ್ಧರಿಸಿದ್ದು, ಅದರಂತೆ ಈ ಕೆಳಕಂಡ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 600 ಶುಶೂಷಾಧಿಕಾರಿ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಪಡೆಯಲು ಸರ್ಕಾರವು ಅನುಮತಿ ನೀಡಿ ಆದೇಶಿಸಿದೆ.
1. ಇಲಾಖೆಯಲ್ಲಿ ನೇರ ನೇಮಕಾತಿ ಮುಖಾಂತರ ಶುಶೂಷಾಧಿಕಾರಿ ಹುದ್ದೆಗಳು ಭರ್ತಿಯಾದ ನಂತರ 600 ಶುಶೂಷಾಧಿಕಾರಿ ಹುದ್ದೆಗಳ ಗುತ್ತಿಗೆ ಸೇವೆಯನ್ನು ರದ್ದುಗೊಳಿಸತಕ್ಕದ್ದು. 2. ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವಾಗ ಭವಿಷ್ಯದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನಿನ ತೊಡಕುಗಳು ಉದ್ಭವಿಸದಂತೆ ಕ್ರಮವಹಿಸತಕ್ಕದ್ದು.
3. ಗುತ್ತಿಗೆ ಆಧಾರದ ಮೇಲಿನ ಸಿಬ್ಬಂದಿಗಳ ಆಯ್ಕೆಯನ್ನು ಈ ಹಿಂದಿನ ಗುತ್ತಿಗೆ ಅವಧಿಯ ಸೇವೆಯನ್ನು ಪರಿಗಣಿಸದೆ, ಮತ್ತೆ ಹೊಸದಾಗಿ ಸೇವೆಗೆ ಸೇರಿಸಿಕೊಂಡಂತೆ ಪರಿಗಣಿಸಿ ಆಯ್ಕೆ (The Recruitment Should be done De-novo, without considering the pre-service of contract employees, as per extant C/R rules.) 4. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ಶುಶೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಪೂರ್ವದಲ್ಲಿ ಜಿಲ್ಲಾವಾರು ಮತ್ತು ಸಿಬ್ಬಂದಿಗಳ ಕೊರತೆ ಇರುವ ಕೇಂದ್ರಗಳ ಮತ್ತು ಜಿಲ್ಲಾವಾರು ಮಾಹಿತಿಯನ್ನು ಮತ್ತು ಯಾವ ಜಿಲ್ಲೆ ಮತ್ತು ಕೇಂದ್ರಗಳಿಗೆ ಪಸ್ತಾಪಿತ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತುಂಬುವ ಅವಶ್ಯಕತೆ ಇದೆ ಎಂಬುದರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 577 ವೆಚ್ಚ-5/2025, ದಿನಾಂಕ: 19/09/2025 ರಲ್ಲಿ ನೀಡಿರುವ ಸಹಮತಿಯಂತೆ ಹೊರಡಿಸಿದೆ ಎಂದು ಹೇಳಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ಕಾರನ್ನು ಉಡುಗೋರೆಯಾಗಿ ನೀಡಿದ ನಟ ವಿನೋದ್ ರಾಜ್
Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ
BREAKING: ನಾಳೆ ಮಧ್ಯಾಹ್ನಕ್ಕೆ ಜಾತಿಗಣತಿ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ಹೈಕೋರ್ಟ್ ಮುಂದೂಡಿಕೆ