ಬೆಂಗಳೂರು : ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಕಾರ್ಯಕ್ಕಾಗಿ ಬಿ ಮತ್ತು ‘ಸಿ ವೃಂದದ’ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲೆ ಓದಲಾದ ಅರೆ ಸರ್ಕಾರಿ ಪತ್ರದಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿರುವ ಹಿನ್ನೆಲೆಯಲ್ಲಿ, ಈ ಸಮೀಕ್ಷೆ ಕಾರ್ಯಕ್ಕಾಗಿ ‘ಬಿ’ ಮತ್ತು ‘ಸಿ’ ವೃಂದದ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳುವ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಲುವಾಗಿ ಎಲ್ಲಾ ಗ್ರೂಪ್-‘ಬಿ’ ಮತ್ತು ಗ್ರೂಪ್-‘ಸಿ’ ವೃಂದದ ಅಧಿಕಾರಿ/ಸಿಬ್ಬಂದಿಗಳ ವಿವರಗಳನ್ನು ಪಡೆಯಲಾಗಿದ್ದು, ನೇಮಕಾತಿ ಆದೇಶ ಹೊರಡಿಸಿ, ಜಾರಿ ಮಾಡಲು ಕ್ರಮ ಜರುಗಿಸಲಾಗುವುದರಿಂದ, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಇವರು ಈ ಕೆಳಕಂಡ ಅಂಶಗಳಿಗೆ ಅನುಮೋದನೆ ಕೋರಿರುತ್ತಾರೆ:-
1. ಮೇಲೆ ಓದಲಾದ ಪತ್ರದ ಅನುಬಂಧದಲ್ಲಿ ನಮೂದಿಸಿರುವ ಇಲಾಖೆಗಳಲ್ಲಿನ ಅಧಿಕಾರಿ/ನೌಕರರುಗಳನ್ನು ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿಕೊಳ್ಳಲು ಅನುಮೋದನೆ.
2. ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ/ನೌಕರರುಗಳಿಗೆ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡುವ ಬಗ್ಗೆ.
3. ಸಮೀಕ್ಷಾ ಕಾರ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ/ನೌಕರರುಗಳು ಸಮೀಕ್ಷಾ ಕಾರ್ಯನಿರ್ವಹಿಸಲು ನಿರ್ಲಕ್ಷ್ಯತೆ ತೋರಿದ್ದಲ್ಲಿ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿಗಳ ರೀತ್ಯಾ ಗ್ರೇಟರ್ ಬೆಂಗಳೂರು ಪ್ರಾದಿಕಾರ ವತಿಯಿಂದ ಶಿಸ್ತು ಕ್ರಮ ಜರುಗಿಸಲು ಅಧಿಕಾರ ಪ್ರತ್ಯಾಯೋಜನೆ ಅನುಮೋದನೆ.