ಬೆಂಗಳೂರು : ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಈ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.
ನಿನ್ನೆ ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿ, ಜನಗಣತಿಗಿಂತ ಈ ಸರ್ವೆ ಯಾವ ರೀತಿಯಲ್ಲೂ ಕಡಿಮೆಯಲ್ಲ. ಜನಗಣತಿಯನ್ನು ಕೇಂದ್ರ ಸರ್ಕಾರವಷ್ಟೇ ಮಾಡಬೇಕೆಂದು ವಾದಿಸಿದರು.
ರಾಜ್ಯದೆಲ್ಲೆಡೆ ಸರ್ಕಾರ ಜಾತಿ ಗಣತಿಗೆ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 342ಎ(3)ಗೆ ವಿರುದ್ಧವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ವರದಿ ಪರಿಗಣಿಸದೇ ಹೊಸ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಜಾತಿಗಣತಿಯ ಅಂಕಿ ಅಂಶಗಳನ್ನು ಆಧಾರ್ ಗೆ ಲಿಂಕ್ ಮಾಡ್ತಿದ್ದಾರೆ. ಜಿಯೋ ಟ್ಯಾಗಿಂಗ್ ಮಾಡಿ ಆಧಾರ್ ಲಿಂಕ್ ಮಾಡುತ್ತಿದ್ದಾರೆ. ಸರ್ಕಾರದ ಈ ಕ್ರಮ ಕಾನೂನು ಬಾಹಿರವಾಗಿದೆ ಎಂಬುದಾಗಿ ವಾದಿಸಿದರು.