ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಮಳೆ ಆಗುತ್ತಿದೆ. ಇದೀಗ ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಮತ್ತೆ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು ರಾಜ್ಯದ ಈ 7 ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಅಷ್ಟೇ ಅಲ್ಲದೆ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27ರ ಬಳಿಕ ಭಾರಿ ಮಳೆಯಾಗಲಿದೆ.